ತ್ಯಾಗಭೂಮಿ ಡಿಜಿಟಲ್ ಡೆಸ್ಕ್, (ಹೊಸಪೇಟೆ) ವಿಜಯನಗರ.
ಫೆಬ್ರವರಿ 21 ರಂದು ನಗರದ ವಿಜಯನಗರ ಕಾಲೇಜ್ನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, 50ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ವಿಜಯನಗರ ಕಾಲೇಜು ಇವರ ಸಹಯೋಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೋಮವಾರ ಮಾತನಾಡಿದರು.
ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಪ್ರತಿಷ್ಠಿತ 50ಕ್ಕೂ ಹೆಚ್ಚು ಎಮ್ಎನ್ಸಿ ಕಂಪನಿಗಳು ಭಾಗವಹಿಸಲಿವೆ. ಇದರಿಂದ ಜಿಲ್ಲೆಯ ನಿರುದ್ಯೋಗ ಯುವಕ, ಯುವತಿಯರಿಗೆ ಸಾಕಷ್ಟು ಉದ್ಯೋಗ ಅವಕಾಶಗಳು ಸಿಗಲಿದೆ. ಜಿಲ್ಲೆಯ ವಿದ್ಯಾವಂತ ನಿರುದ್ಯೋಗಿಗಳು ವಿಶೇಷವಾಗಿ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಈ ಸುವರ್ಣ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಅರ್ಹ ಆಸಕ್ತರು 18 ವರ್ಷದಿಂದ 35 ವರ್ಷದೊಳಗಿನ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಇಂಜಿನಿಯರಿಂಗ್, ಬಿಕಾಂ, ಬಿಎಸ್ಸಿ, ಬಿಎ, ಬಿಬಿಎ, ಬಿಎಚ್ ಎಂ, ಎಂಕಾಂ, ಎಂಬಿಎ, ಎಂಎಸ್ಸಿ, ಎಂಎ ಪದವಿ ವಿದ್ಯಾರ್ಹತೆ ಹೊಂದಿದವರು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಸೂಚಿಸಿದರು.
ಬಳಿಕ ಉದ್ಯೋಗ ಮೇಳದ ಪೋಸ್ಟರ್ ಅನ್ನು ಡಿಸಿ ಕವಿತಾ ಎಸ್.ಮನ್ನಿಕೇರಿ ಬಿಡುಗಡೆಗೊಳಿಸಿದರು. ಉದ್ಯೋಗ ಮೇಳದಲ್ಲಿ ನೋಂದಾಯಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ನಗರದ ವಿಜಯನಗರ ಕಾಲೇಜು ಅಥವಾ ಮೊ.ಸಂ: 7975278783, 9986779624 ಗೆ ಕರೆ ಮಾಡಿ ಸಂಪರ್ಕಿಸಬಹುದು.
ಬಳಿಕ ಉದ್ಯೋಗ ಮೇಳದ ಪೋಸ್ಟರ್ ಅನ್ನು ಡಿಸಿ ಕವಿತಾ ಎಸ್.ಮನ್ನಿಕೇರಿ ಬಿಡುಗಡೆಗೊಳಿಸಿದರು. ಉದ್ಯೋಗ ಮೇಳದಲ್ಲಿ ನೋಂದಾಯಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ನಗರದ ವಿಜಯನಗರ ಕಾಲೇಜು ಅಥವಾ ಮೊ.ಸಂ: 7975278783, 9986779624 ಗೆ ಕರೆ ಮಾಡಿ ಸಂಪರ್ಕಿಸಬಹುದು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ವಿಜಯನಗರ ಕಾಲೇಜು ಅಧ್ಯಕ್ಷ ಮೆಟ್ರಿ ಮಲ್ಲಿಕಾರ್ಜುನ, ಪ್ರಾಂಶುಪಾಲ ಎ.ಮಹಾಂತೇಶ್, ಛೇಂಬರ್ ಆಫ್ ಕಾಮರ್ಸ್ ಅಧ್ಯಕ ಅಶ್ವಿನ್ ಕೊತಂಬರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
****

