Last Updated on February 24, 2026 by ASHOK UPPAR
ಹಂಪಿ ಕನ್ನಡ ವಿಶ್ವವಿದ್ಯಾಲಯದ 34 ನೇ ಘಟಿಕೋತ್ಸವ, ಪ್ರಾಚೀನ ಜ್ಞಾನ ಮತ್ತು ಆಧುನಿಕ ಶಿಕ್ಷಣದ ಸಮನ್ವಯದಿಂದ ‘ವಿಕಸಿತ ಭಾರತ’ ನಿರ್ಮಾಣ ಸಾಧ್ಯ: ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ (ಹೊಸಪೇಟೆ).
“ಪ್ರಾಚೀನ ಕಾಲದಲ್ಲಿ ಭಾರತವು ತನ್ನ ಸಮೃದ್ಧ ಶಿಕ್ಷಣ ವ್ಯವಸ್ಥೆ, ವಿಜ್ಞಾನ ಮತ್ತು ಆಧ್ಯಾತ್ಮಿಕತೆಯಿಂದಾಗಿ ‘ವಿಶ್ವಗುರು’ ಎನಿಸಿಕೊಂಡಿತ್ತು. ಅದೇ ಪರಂಪರೆಯನ್ನು ಮುಂದುವರಿಸುತ್ತಾ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವಲ್ಲಿ ಯುವಜನತೆಯ ಪಾತ್ರ ನಿರ್ಣಾಯಕವಾಗಿದೆ,” ಎಂದು ಕರ್ನಾಟಕದ ರಾಜ್ಯಪಾಲರು ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ‘ನುಡಿಹಬ್ಬ’ ಹಾಗೂ 34 ನೇ ಘಟಿಕೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ನಾಡೋಜ ಪ್ರಶಸ್ತಿ ಹಾಗೂ ಪದವಿ ಪ್ರದಾನ ಮಾಡಿ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿ, ಇಂದು ತನ್ನ ಭವ್ಯ ಇತಿಹಾಸ ಮತ್ತು ವಾಸ್ತುಶಿಲ್ಪಕ್ಕೆ ವಿಶ್ವಪ್ರಸಿದ್ಧವಾಗಿದೆ. ಇಲ್ಲಿರುವ ಕನ್ನಡ ವಿಶ್ವವಿದ್ಯಾಲಯವು ನಮ್ಮ ಸಮೃದ್ಧ ಪರಂಪರೆ ಮತ್ತು ಆಧುನಿಕ ಶಿಕ್ಷಣದ ಕೊಂಡಿಯಾಗಿದೆ.ವಿಕಸಿತ ಭಾರತದ ಗುರಿ: ‘ಮೇಕ್ ಇನ್ ಇಂಡಿಯಾ’, ‘ಡಿಜಿಟಲ್ ಇಂಡಿಯಾ’ ಮತ್ತು ‘ಸ್ಟಾರ್ಟ್-ಅಪ್’ ಯೋಜನೆಗಳ ಸದುಪಯೋಗ ಪಡೆದುಕೊಂಡು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಯುವಕರು ಶ್ರಮಿಸಬೇಕು. ಶಿಕ್ಷಣದ ಹಂತದಿಂದ ಈಗ ನೀವು ಕರ್ಮದ ಹಂತಕ್ಕೆ ಕಾಲಿಡುತ್ತಿದ್ದೀರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಸುಧೈವ ಕುಟುಂಬಕಂ: ಭಾರತೀಯ ಶಿಕ್ಷಣ ಪದ್ಧತಿಯು ‘ವಸುಧೈವ ಕುಟುಂಬಕಂ’ ಎಂಬ ಉದಾತ್ತ ತತ್ವದ ಮೇಲೆ ನಿಂತಿದೆ. ಆಧುನಿಕ ಜ್ಞಾನವನ್ನು ಮಾನವೀಯ ಮೌಲ್ಯಗಳೊಂದಿಗೆ ಬೆರೆಸಿ ಜಗತ್ತಿಗೆ ಮಾದರಿಯಾಗುವಂತೆ ನಾವು ಶಿಕ್ಷಣ ನೀಡಬೇಕಿದೆ.
ಸಂಶೋಧನೆಗೆ ಒತ್ತು: ಕನ್ನಡ ಭಾಷೆ, ಸಾಹಿತ್ಯದ ಜೊತೆಗೆ ಇತಿಹಾಸ, ದರ್ಶನ ಶಾಸ್ತ್ರ, ಪುರಾತತ್ವ ಮತ್ತು ಸಮಾಜಶಾಸ್ತ್ರದಂತಹ ವಿಷಯಗಳಲ್ಲಿ ವಿಶ್ವವಿದ್ಯಾಲಯವು ನಡೆಸುತ್ತಿರುವ ಸಂಶೋಧನಾ ಕಾರ್ಯಗಳನ್ನು ರಾಜ್ಯಪಾಲರು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಕೋರಿದ ಅವರು, ಶಿಕ್ಷಕರು ಕೇವಲ ಜ್ಞಾನ ನೀಡುವವರಲ್ಲ, ಬದಲಾಗಿ ಜೀವನಕ್ಕೆ ಸರಿಯಾದ ದಾರಿ ತೋರಿಸುವ ಮಾರ್ಗದರ್ಶಕರು ಎಂದು ಬಣ್ಣಿಸಿ ಅಭಿನಂದಿಸಿದರು.
ಉನ್ನತ ಶಿಕ್ಷಣ ಸಚಿವರು ಹಾಗೂ ಸಮಕುಲಾಧಿಪತಿಗಳಾದ ಡಾ:ಎಂ.ಸಿ.ಸುಧಾಕರ್ ಡಿ.ಲಿಟ್ ಹಾಗೂ ಪಿ.ಹೆಚ್.ಡಿ. ಪದವಿಗಳನ್ನು ಪ್ರದಾನ ಮಾಡಿ ಮಾತನಾಡಿ, ವಿಶ್ವವಿದ್ಯಾನಿಲಯಗಳಿಗೆ ಸಂಯೋಜಿತ ಕಾಲೇಜುಗಳ ಕೊರತೆಯಿಂದಾಗಿ ಆರ್ಥಿಕ ನಷ್ಟ ಎದುರಿಸುತ್ತಿದ್ದು ಇದು ಸರ್ಕಾರದ ಗಮನದಲ್ಲಿದೆ. ಈ ಹಿನ್ನಲೆಯಲ್ಲಿ ವಿಶ್ವವಿದ್ಯಾಲಯಗಳಲ್ಲಿ ಆರ್ಥಿಕ ಶಿಸ್ತು ಮತ್ತು ಆಧುನಿಕ ತಂತ್ರಜ್ಞಾನದ ಅಳವಡಿಕೆಗೆ ಸರ್ಕಾರದ ಒತ್ತು ನೀಡುತ್ತಿದೆ. ರಾಜ್ಯದ ವಿಶ್ವವಿದ್ಯಾಲಯಗಳು ಕೇವಲ ಸಂಖ್ಯೆಯಲ್ಲಿ ಹೆಚ್ಚಾಗುವುದಕ್ಕಿಂತ ಗುಣಮಟ್ಟ ಮತ್ತು ಆರ್ಥಿಕ ಶಿಸ್ತನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದರು.
ರಾಜ್ಯದಲ್ಲಿ ಪ್ರಸ್ತುತ 32 ಸರ್ಕಾರಿ ವಿಶ್ವವಿದ್ಯಾಲಯಗಳಿದ್ದು, ಇದರಲ್ಲಿ ಹಂಪಿ ಕನ್ನಡ, ಜಾನಪದ, ಸಂಗೀತ, ಸಂಸ್ಕೃತ ಮತ್ತು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಎಂಬ ಐದು ವಿಶೇಷ ವಿಶ್ವವಿದ್ಯಾಲಯಗಳು ಸೇರಿವೆ. 107 ವರ್ಷಗಳ ಇತಿಹಾಸವಿರುವ ಮೈಸೂರು ವಿಶ್ವವಿದ್ಯಾಲಯವು ರಾಜ್ಯದ ಹೆಮ್ಮೆಯಾಗಿದೆ.
ರಾಜಕೀಯ ಮತ್ತು ಭಾವನಾತ್ಮಕ ಕಾರಣಗಳಿಂದ ಅವೈಜ್ಞಾನಿಕವಾಗಿ ಹಲವು ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿರುವುದು ಪ್ರಸ್ತುತ ಅವುಗಳ ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಿದೆ. ಈ ಸಮಸ್ಯೆಗಳ ನಿವಾರಣೆಗಾಗಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಆರ್ಥಿಕ ಶಿಸ್ತು ತರಲು ಉಪಮುಖ್ಯಮಂತ್ರಿಗಳ ನೇತೃತ್ವದ ಸಂಪುಟ ಉಪಸಮಿತಿಯು ಸಮಗ್ರ ಅಧ್ಯಯನ ನಡೆಸುತ್ತಿದೆ.

ಅನುದಾನ ಬಿಡುಗಡೆ: ಕನ್ನಡ ವಿಶ್ವವಿದ್ಯಾಲಯದ ಆರ್ಥಿಕ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ. ಕಳೆದ ವರ್ಷ ವಿದ್ಯುತ್ ಬಿಲ್ ಪಾವತಿಸಲು ನೆರವು ನೀಡಿದ್ದ ಸರ್ಕಾರ, ಪ್ರಸಕ್ತ 2025-26ನೇ ಸಾಲಿನಲ್ಲಿ ಕನ್ನಡ ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂಪಾಯಿ ಹಾಗೂ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಒದಗಿಸಿದೆ.
ತಂತ್ರಜ್ಞಾನದ ಬಳಕೆ: ಭಾಷೆ ಮತ್ತು ಸಂಸ್ಕೃತಿಯ ಅಧ್ಯಯನದಲ್ಲಿ ಆಧುನಿಕತೆಯ ಸ್ಪರ್ಶವಿರಬೇಕು. ಇಂದಿನ ಕಾಲಘಟ್ಟದಲ್ಲಿ ಕೃತಕ ಬುದ್ಧಿಮತ್ತೆ ಬಳಸಿಕೊಂಡು ನಮ್ಮ ಭಾಷೆ, ಸಾಹಿತ್ಯ ಮತ್ತು ಇತಿಹಾಸದ ಜ್ಞಾನವನ್ನು ವೇಗವಾಗಿ ಜನರಿಗೆ ತಲುಪಿಸುವ ಕೆಲಸವಾಗಬೇಕು ಎಂದು ಸಚಿವರು ಕರೆ ನೀಡಿದರು.
ಪದವಿ ಪ್ರದಾನ: ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ಅಧ್ಯಯನ ಪೂರ್ಣಗೊಳಿಸಿದ ಸುಮಾರು 107 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಬಡ ಕುಟುಂಬಗಳಿಂದ ಬಂದು ಈ ವಿಶೇಷ ವಿಶ್ವವಿದ್ಯಾಲಯದಲ್ಲಿ ಜ್ಞಾನಾರ್ಜನೆ ಮಾಡಿದ ವಿದ್ಯಾರ್ಥಿಗಳ ಸಾಧನೆಯನ್ನು ಸಚಿವರು ಶ್ಲಾಘಿಸಿದರು.

ವಿಶ್ರಾಂತ ಪ್ರಾಧ್ಯಾಪಕರು ಮತ್ತು ಸಂಸ್ಕೃತಿ ಚಿಂತಕರಾದ ಡಾ: ಕೆ. ಮರುಳಸಿದ್ದಪ್ಪ ಅವರು ಘಟಿಕೋತ್ಸವ ಭಾಷಣ ಮಾಡಿ ಕನ್ನಡ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆ ಮತ್ತು ಅಸ್ಮಿತೆಯ ಸಂಕೇತವಾಗಿದೆ. ನಾಡಿನ ಭಾಷೆ ಹಾಗೂ ಸಂಸ್ಕೃತಿಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆ ಮತ್ತು ಸಾಮಾಜಿಕ ಸವಾಲುಗಳ ಕುರಿತು ಕಳವಳ ವ್ಯಕ್ತಪಡಿಸಿ
ಸರ್ಕಾರಿ ಶಾಲೆಗಳ ಮುಚ್ಚುವಿಕೆ ಪ್ರತಿಗಾಮಿ ಹೆಜ್ಜೆ,
ಇಂಗ್ಲಿಷರ ಕಾಲದಲ್ಲಿ ಆರಂಭವಾದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಇಂದು ಹಳ್ಳಿ ಹಳ್ಳಿಗೂ ತಲುಪಿದ್ದರೂ, ಗುಣಮಟ್ಟದ ಕೊರತೆ ಎದ್ದು ಕಾಣುತ್ತಿದೆ. “ಸುಮಾರು ಏಳುನೂರು ಶಾಲೆಗಳನ್ನು ಉನ್ನತೀಕರಿಸುವ ನೆಪದಲ್ಲಿ ಗ್ರಾಮೀಣ ಭಾಗದ ಸಣ್ಣ ಶಾಲೆಗಳನ್ನು ಮುಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ, ಶಾಲೆಗಳಿಲ್ಲದ ಹಳ್ಳಿಗಳು ದೇವರಿಲ್ಲದ ಗುಡಿಯಂತಾಗಲಿದ್ದು, ಇದು ಬಡವರ ಮಕ್ಕಳ ಶಿಕ್ಷಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅವರು ಅಭಿಪ್ರಾಯಿಸಿದರು.
ಕನ್ನಡಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಭಾರತದ ಪ್ರಾಚೀನ ಭಾಷೆಗಳಲ್ಲಿ ಇದು ಎರಡನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತ್ರಿಭಾಷಾ ಸೂತ್ರ ಮತ್ತು ಹಿಂದಿ ಹೇರಿಕೆಯ ಪ್ರಯತ್ನಗಳನ್ನು ಅವರು ಖಂಡಿಸಿದರು. ತಮಿಳುನಾಡು ಮತ್ತು ಕೇರಳದ ಮಾದರಿಯಲ್ಲಿ ಕರ್ನಾಟಕವೂ ಸಹ ದ್ವಿಭಾಷಾ ಸೂತ್ರವನ್ನು ಅಳವಡಿಸಿಕೊಳ್ಳಬೇಕು ಹಾಗೂ ಕುವೆಂಪು ಅವರ ‘ವಿಶ್ವಮಾನವ’ ತತ್ವವನ್ನು ಪಾಲಿಸಬೇಕು ಎಂದು ಅವರು ಕರೆ ನೀಡಿದರು.
ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಶೇ. 75 ರಷ್ಟು ಬೋಧಕ ಹುದ್ದೆಗಳು ಖಾಲಿಯಿದ್ದು, ಅತಿಥಿ ಉಪನ್ಯಾಸಕರ ಮೇಲೆ ವ್ಯವಸ್ಥೆ ಅವಲಂಬಿತವಾಗಿದೆ. “ಹೊಸ ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗುತ್ತಿದ್ದರೂ ಅಲ್ಲಿ ಕಟ್ಟಡ, ಪ್ರಯೋಗಾಲಯ ಮತ್ತು ಗ್ರಂಥಾಲಯಗಳಂತಹ ಕನಿಷ್ಠ ಸೌಕರ್ಯಗಳಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ದೇಶದಲ್ಲಿ ಹೆಚ್ಚುತ್ತಿರುವ ಕೋಮುದ್ವೇಷ, ಅಸಹನೆ ಮತ್ತು ಅಧಿಕಾರ ಕೇಂದ್ರೀಕರಣದ ಕುರಿತು ಮಾತನಾಡಿದ ಅವರು, ಸಂವಿಧಾನದ ಆಶಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ದತೆಯನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಕೃತಕ ಬುದ್ಧಿಮತ್ತೆಯ ಕಾಲದಲ್ಲಿ ಮನುಷ್ಯನಿಗೆ ಬೌದ್ಧಿಕ ವಿವೇಕ ಅತ್ಯಗತ್ಯವಾಗಿದ್ದು, ಯುವಜನರು ಪ್ರಶ್ನಿಸುವ ಗುಣ ಬೆಳೆಸಿಕೊಂಡು, ಸಾಮಾಜಿಕ ಪ್ರಜಾಪ್ರಭುತ್ವದ ಹಾದಿಯಲ್ಲಿ ನಡೆಯಬೇಕು ಎಂದರು.

ಮೂವರಿಗೆ ನಾಡೋಜ ಪ್ರಶಸ್ತಿ:
ಸಮಾಜಸೇವೆ, ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗೌರವಾನ್ವಿತ ಪ್ರೊ. ಸಿ. ಮಹದೇವಪ್ಪ, ಮತ್ತು ಡಾ. ಎಚ್.ಎಸ್.ಸತ್ಯನ್ ಅವರಿಗೆ ಈ ಸಂದರ್ಭದಲ್ಲಿ ‘ನಾಡೋಜ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರೊ. ಜಿ.ರಾಮಕೃಷ್ಣ ಅವರು ಪದವಿ ಸ್ವೀಕರಿಸಲು ಆಗಮಿಸಿರಲಿಲ್ಲ.

ಕುಲಪತಿಗಳಾದ ಡಾ. ಡಿ.ವಿ.ಪರಮಶಿವಮೂರ್ತಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶೈಕ್ಷಣಿಕ ಮತ್ತು ಸಂಶೋಧನಾಭಿವೃದ್ಧಿ ನಿರ್ದೇಶಕ ಡಾ.ಎಸ್.ವೈ.ಸೋಮಶೇಖರ್ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಕುಲಸಚಿವ ಡಾ.ವಿರೂಪಾಕ್ಷಿ ಪೂಜಾರಹಳ್ಳಿ, ಹಣಕಾಸು ವಿಭಾಗದ ಹಣಕಾಸು ಅಧಿಕಾರಿ ಡಾ.ಎ.ಶ್ರೀಧರ, ಅಧ್ಯಯನಾಂಗ ನಿರ್ದೇಶಕ ಅಧ್ಯಯನಾಂಗದ ನಿರ್ದೇಶಕ ಡಾ.ಅಮರೇಶ್ ಯತಗಲ್, ವಿಜ್ಞಾನ ನಿಕಾಯದ ಪ್ರಾಧ್ಯಾಪಕ ಡೀನ್ ಡಾ.ಶೈಲಜ.ಇಂ.ಹಿರೇಮಠ, ಭಾಷಾ ನಿಕಾಯದ ಡೀನ್ ಡಾ.ಮಾಧವ ಪೆರಾಜೆ, ಸಮಾಜ ವಿಜ್ಞಾನಗಳ ನಿಕಾಯ ಪ್ರಾಧ್ಯಾಪಕ ಡಾ.ಹೆಚ್.ಡಿ.ಪ್ರಶಾಂತ್, ಲಲಿತಕಲಾ ನಿಕಾಯ ಪ್ರಾಧ್ಯಾಪಕ ಡಾ.ಶಿವಾನಂದ ಎಸ್.ವಿರಕ್ತಮಠ ಸೇರಿ ಇತರರಿದ್ದರು.