Last Updated on March 4, 2026 by ASHOK UPPAR
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಓರ್ವ ಸಾವು ಮತ್ತಿಬ್ಬರಿಗೆ ಗಾಯ.
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ (ಹೊಸಪೇಟೆ).
ಹೊಸಪೇಟೆಯ ಪಟೇಲ್ ನಗರದಲ್ಲಿ ಗೋಪಿ ಶಾಲೆಗೆ ಹೋಗುವ ದಾರಿಯಲ್ಲಿ ಬೈಕ್ ಟು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ದುರ್ದೈವಿ ವೀರಾಂಜನೇಯ (46) ಬೈಕ್ ಸವಾರ. ಇನ್ನೂ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

