ಹಗರಿಬೊಮ್ಮನಹಳ್ಳಿಯಲ್ಲಿ ಇಂದು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ.

Spread the love

 

ತ್ಯಾಗಭೂಮಿ ಡಿಜಿಟಲ್‌ ಡೆಸ್ಕ್, ಹಗರಿಬೊಮ್ಮನಹಳ್ಳಿ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜು.24 ರಂದು ಶುಕ್ಬೆರವಾರ, ಬೆಳಗ್ಗೆ 10-30 ಕ್ಕೆ ಪಟ್ಟಣದ ಕನ್ಯಿಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಪತ್ರಿಕಾ ದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ..

ಶಾಸಕ ಕೆ. ನೇಮಿರಾಜ್ ನಾಯ್ಕ್  ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ ಬಿ.ಕೆ.ವಿಶ್ವನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ಬೀದರ್ ಜಿಲ್ಲಾ ಪ್ರಜಾವಾಣಿ ವರದಿಗಾರ ಶಶಿಕಾಂತ್ ಶಂಬೆಳ್ಳೆ ಅವರು ನೀಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪಿ ಸತ್ಯನಾರಾಯಣ ,ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಕವಿತ ಆರ್, ತಾ ಪಂ ಇ ಒ ಪಾಲಯ್ಯನಕೋಟೆ ವಿಶ್ವನಾಥ, ಪುರಸಭೆ ಮುಖ್ಯಾಧಿಕಾರಿ ಎಂ ಕೆ ಮುಗಳಿ, ಸಂಘದ ರಾಜ್ಯ ಸಮಿತಿ ಸದಸ್ಯ ವೆಂಕೋಬ ನಾಯಕ್, ಪ್ರಧಾನ ಕಾರ್ಯದರ್ಶಿ ಕೆ. ಲಕ್ಷ್ಮಣ, ಉಪಾಧ್ಯಕ್ಷರಾದ ಉಜ್ಜಿನಿ ರುದ್ರಪ್ಪ, ಟಿ.ಬಿ.ರಾಜು, ಜಿಲ್ಲಾ ಸಮಿತಿ ಸದಸ್ಯ ಸಿ.ಶಿವಾನಂದ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಾಜಾವಲಿ ಗಡ್ಡದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *