ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ.
ಹೂವಿನಹಡಗಲಿ : ಬೈಕ್‌ಗೆ ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಸಂಭವಿಸಿದೆ.
ತಾಲ್ಲೂಕಿನ ಬಸರಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಅಂಕ್ಲಿ ತಾಂಡಾದ ನಿವಾಸಿ ಶಿವ್ಯಾನಾಯ್ಕ್ (50) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಶಿವ್ಯಾನಾಯ್ಕ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭರವಸೆಗೆ ತೀವ್ರ ರಕ್ತಸ್ರಾವವಾಗಿ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಹೂವಿನಹಡಗಲಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ.
