ಹಂಪಿಯ ತುಂಗಭದ್ರಾ ನದಿಯಲ್ಲಿ ತಾಯಿ-ಮಗಳು ನಾಪತ್ತೆ: ಪ್ರವಾಸದ ವೇಳೆ ದುರಂತ.

Spread the love

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ.

​ಹೊಸಪೇಟೆ : ಐತಿಹಾಸಿಕ ಪ್ರವಾಸಿ ತಾಣ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದ ತಾಯಿ ಹಾಗೂ ಅಪ್ರಾಪ್ತ ಮಗಳು ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಕೊಚ್ಚಿಹೋಗಿ ನಾಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ.

​ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದ ನಿವಾಸಿಗಳಾದ ಶಾಹೀನ್ (38) ಹಾಗೂ ಅವರ ಪುತ್ರಿ ಯಾಸ್ಮೀನ್ (13) ನದಿಯಲ್ಲಿ ಕಣ್ಮರೆಯಾದ ದುರ್ದೈವಿಗಳು.

​ಘಟನೆಯ ವಿವರ:

ಶಾಹೀನ್ ಹಾಗೂ ಯಾಸ್ಮೀನ್ ತಮ್ಮ ಸಂಬಂಧಿಕರೊಂದಿಗೆ ಹಂಪಿಗೆ ಪ್ರವಾಸಕ್ಕೆ ಬಂದಿದ್ದರು. ಊಟ ತಯಾರಿಸಿದ ಬಳಿಕ ತುಂಗಭದ್ರಾ ನದಿಯ ಸ್ನಾನಘಟ್ಟದಲ್ಲಿ ಸ್ನಾನ ಮಾಡಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನದಿಯ ನೀರಿನ ರಭಸಕ್ಕೆ ಇಬ್ಬರೂ ಕೊಚ್ಚಿಹೋಗಿದ್ದಾರೆ.

​ವಿಷಯ ತಿಳಿಯುತ್ತಿದ್ದಂತೆ ಹಂಪಿ ಪ್ರವಾಸಿ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಸ್ಥಳೀಯ ಈಜುಗಾರರು ಸ್ಥಳಕ್ಕೆ ಧಾವಿಸಿದ್ದು, ನದಿಯಲ್ಲಿ ನಾಪತ್ತೆಯಾಗಿರುವ ತಾಯಿ-ಮಗಳ ಪತ್ತೆಗಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ. ಹಂಪಿ ಪ್ರವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Reply

Your email address will not be published. Required fields are marked *