ಹಗರಿಬೊಮ್ಮನಹಳ್ಳಿ ಪುರಸಭೆ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ರೇಷ್ಮಾ ಸಿಕಂದರ್.
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.
ಹಗರಿಬೊಮ್ಮನಹಳ್ಳಿ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷರಾಗಿ ಕೆ.ರೇಷ್ಮಾ ಸಿಕಂದರ್ ಸೋಮವಾರ ಪದಗ್ರಹಣ ಕಾರ್ಯಕ್ರಮದ ಮೂಲಕ ಅಧಿಕಾರ ಸ್ವೀಕರಿಸಿದರು.
ಬಳಿಕ ಅಧ್ಯಕ್ಷೆ ರೇಷ್ಮಾ ಸಿಕಂದರ್ ಮಾತನಾಡಿ, ಎಲ್ಲಾ ಸದಸ್ಯರ ಸಹಕಾರದೊಂದಿಗೆ ಅಧ್ಯಕ್ಷೆರಾಗಿದ್ದು ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಪುರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಿಗೆ ಮೂಲಭೂತ ಸೌಲಭ್ಯ ಗಳನ್ನು ಒದಗಿಸಲಾಗುವುದು. ಕುಡಿಯುವ ನೀರು, ಸಿ.ಸಿ.ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.
ಇದೇ ವೇಳೆ ಪುರಸಭೆ ಉಪಾಧ್ಯಕ್ಷೆ ನೇತ್ರಾವತಿ ಹುಚ್ಚಪ್ಪ ಸೆರೆಗಾರ್, ನಿಕಟಪೂರ್ವ ಅಧ್ಯಕ್ಷ ಎಂ.ಮರಿರಾಮಪ್ಪ, ನಿಕಟಪೂರ್ವ ಉಪಾಧ್ಯಕ್ಷರಾದ ಅಂಬಿಕಾ ದೇವೇಂದ್ರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ಮಹಿಳಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಸಾಹಿರಾ ಬಾನು, ತಾಲೂಕು ಅಧ್ಯಕ್ಷೆ ಯಶೋಧ ಮಂಜುನಾಥ್, ಮುಖಂಡರಾದ ಸಿಕಂದರ್, ಗುಂಡ್ರು ಹನುಮಂತ, ಸೆರೆಗಾರ ಹುಚ್ಚಪ್ಪ, ಕವಿತಾ ಹಾಲ್ದಾಳ್, ಉಪ್ಪಾರ ಬಾಳಪ್ಪ, ತ್ಯಾವಣಿಗಿ ಕೊಟ್ರೇಶ್, ಬಾರಿಕರ ಬಾಪೂಜಿ, ಮಡಿವಾಳರ ಪ್ರಕಾಶ್, ಇತರರಿದ್ದರು.
